ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ವಿತರಣೆ! ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

ಹಲೋ ಸ್ನೇಹಿತರೆ ನಿಮಗಿದ್ರೆ ನಿಮಗಿದೆ ಸಂತಸ ಸುದ್ದಿ ಏನೆಂದರೆ ಕಾಲೇಜ್ ಮತ್ತು ಸ್ಕೂಲ್ ಗೆ ಹೋಗುವ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಒಂದು ಮಹತ್ವದ ಯೋಜನೆಯನ್ನು ಹೊರಹಾಕಿದೆ . ಹೌದು ಸರ್ಕಾರವು ಈಗ ಸ್ಕೂಲ್ ಮತ್ತೆ ಕಾಲೇಜಿಗೆ ಹೋಗು ವಿದ್ಯಾರ್ಥಿಗಳಿಗೆ ಬಸ್ ಪಾಸಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಬೇಕಾಗಿ ಕೋರಿದೆ ಬನ್ನಿ ಈ ಲೇಖನದಲ್ಲಿ ನಾವು ನಿಮಗೆ ಬಸ್ ಪಾಸಿಗೆ ಹೇಗೆ ಅರ್ಜಿ ಸಲ್ಲಿಸಬಹುದು ಎಂದು ಈ ಕೆಳಗೆ ನೀಡಿದ್ದೇವೆ.

Distribution of free bus pass to students
Distribution of free bus pass to students

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್‍ಗಳನ್ನು ವಿತರಣೆ ಮಾಡಲಾಗುವುದು.

ಈ ಸಂಬಂಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್‍ಗಳನ್ನು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಿ, ಕರ್ನಾಟಕ-ಒನ್ [K-one] ಕೇಂದ್ರಗಳ ಮುಖಾಂತರ ಪಾಸ್ ಪಡೆಯಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಸೇವಾಸಿಂಧು ಪೋರ್ಟಲ್ ಐಡಿ (URL-sevasindhu.karnataka.gov.in) ಆಗಿದ್ದು, ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿದೆ. ಸ್ಯಾಟ್ಸ್, ಯುಯುಸಿಎಂಎಸ್, ಪಿಯುಇ (SATS/ UUCMS / PUE) ಸಂಖ್ಯೆಯನ್ನು ಹೊಂದಿರದ ವಿದ್ಯಾರ್ಥಿಗಳು ವಾಸಸ್ಥಳ ವಿಳಾಸ ಹಾಗೂ ಇತರೆ ಮಾಹಿತಿ ಬಗ್ಗೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಣ ಪತ್ರ ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಗರಿಷ್ಠ ಪ್ರಯಾಣ ಮಿತಿ 60 ಕಿ.ಮೀ ಆಗಿರುತ್ತದೆ.

ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ದರಗಳ ವಿವರ:

ಪ್ರಾಥಮಿಕ ಶಾಲೆ (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.150, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.

ಪ್ರೌಢ ಶಾಲೆ ಬಾಲಕರು (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.750, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.

ಕಾಲೇಜು ಮತ್ತು ಡಿಪ್ಲೋಮಾ (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,050, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.

ಐಟಿಐ (12 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,310, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.160.

ವೃತ್ತಿಪರ ಕೋರ್ಸ್‍ಗಳು (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,550, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.

ಸಂಜೆ ಕಾಲೇಜು ಮತ್ತು ಪಿ.ಹೆಚ್.ಡಿ(10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,350, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.

ಈ ಮೇಲಿನ ದರದಂತೆ ವಿದ್ಯಾರ್ಥಿಯು ಕೆ-ಒನ್ ಪಾಸ್ ಕೌಂಟರ್‍ಗಳಲ್ಲಿ ಪಾವತಿಸಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *